News Karnataka Kannada
Thursday, May 02 2024
ಚಿಕ್ಕಬಳ್ಳಾಪುರ

ಕೋವಿಡ್‌ ಮೃತರ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ವಿತರಿಸಿದ ಸಚಿವ ಡಾ ಸುಧಾಕರ್

Compensation
Photo Credit :

 

ಚಿಕ್ಕಬಳ್ಳಾಪುರ: ನೂತನ ಸಚಿವ ಡಾ ಸುಧಾಕರ್‌ ಅವರು ಗುರುವಾರ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ನೆರವನ್ನು ವಿತರಿಸಿದರು. . ನೊಂದ ಕುಟುಂಬಗಳ ಮನೆಗೆ ಭೇಟಿ ಕೊಟ್ಟ ಸಚಿವರು ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ ಬಾರಿ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಂತ್ರಿಸುವ ಜವಾಬ್ದಾರಿ ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. 14 ದಿನಗಳಿಂದ ಪಾಸಿಟಿವಿಟಿ ದರ ಎರಡಂಕಿಯನ್ನೂ ದಾಟಿಲ್ಲ. ಮೂರನೇ ಅಲೆ ಆರಂಭದ ಮುನ್ಸೂಚನೆ ಕೆಲ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ. ಆದರೆ ಅಂತಹ ಆತಂಕ ಚಿಕ್ಕಬಳ್ಳಾಪುರದಲ್ಲಿ ಇಲ್ಲ ಎಂದು ತಿಳಿಸಿದರು.
ಗುಡಿಬಂಡೆ, ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕು ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲಾಗಿದೆ. ಜಿಲ್ಲಾಕೇಂದ್ರದ ಹೊಸ ಆಸ್ಪತ್ರೆ ಹಾಗೂ ಹಳೆ ಆಸ್ಪತ್ರೆಯಲ್ಲಿ ಒಟ್ಟು ಎರಡು ಘಟಕ ಆರಂಭಿಸಲಾಗುತ್ತಿದೆ. ಅದೇ ರೀತಿ ಮಕ್ಕಳ ವಿಶೇಷ ನಿಗಾ ಘಟಕವನ್ನು ಜಿಲ್ಲೆಯಲ್ಲಿ ಆರಂಭಿಸಲು ಸಿದ್ಧತೆ ನಡೆದಿದ್ದು, ಅದಕ್ಕೆ ಬೇಕಾದ ವೆಂಟಿಲೇಟರ್ ಗಳನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು. ವೈದ್ಯರ ನೇರ ನೇಮಕಾತಿ ಮಾಡಿರುವುದರಿಂದ ಶೇ.90 ರಷ್ಟು ವೈದ್ಯರ ಕೊರತೆ ನೀಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು