ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NSC) ಮಾಹಿತಿ ನೀಡಿದೆ.ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಆದನ್ನಗಾರಹಳ್ಳಿ, ರೆಡ್ಡಿಗೊಲ್ಲವಾರಹಳ್ಳಿ, ಪೆರೇಸಂದ್ರ ಗ್ರಾಮದ ಸುತ್ತಮುತ್ತ ಸ್ಫೋಟದ ಸದ್ದು ಕೇಳಿ ಬಂದಿದೆ.
ತಾಲೂಕಿನ ಹಲವೆಡೆ ಸ್ಫೋಟದ ಅನುಭವವಾಗಿದೆ. ಬೆಳಗ್ಗೆ 7 ಸುಮಾರಿಗೆ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.
ವಿವಿಧೆಡೆ ಕೇಳಿ ಬಂದ ಸದ್ದಿಗೆ ಜನ ಬೆಚ್ಚಿಬಿದ್ದಿದ್ದಾರೆ.ಭೂಕಂಪನ ತೀವ್ರತೆ: 3.3, ರಷ್ಟು ಇದೆ ಎಂದು ಎನ್ಎಸ್ಸಿ ಟ್ವೀಟ್ ಮಾಡಿದೆ.