ಚಿಕ್ಕಬಳ್ಳಾಪುರದಲ್ಲಿ ಹಲವೆಡೆ ಭೂಕಂಪನದ ಅನುಭವ

ಚಿಕ್ಕಬಳ್ಳಾಪುರ: ಶೆಟ್ಟಿಗೆರೆ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ಪರಿಣಾಮ ಗ್ರಾಮಸ್ಥರು ಮನೆಗಳನ್ನು ತೊರೆದು ಬಯಲು ಪ್ರದೇಶದಲ್ಲಿ ಕಾಲ ಕಳೆದಿದ್ದಾರೆ.

ಭೂಕಂಪನವಾಗುತ್ತಿರುವುದು ಮತ್ತು ಭೂಮಿಯಿಂದ ಭಾರೀ ಪ್ರಮಾಣದ ಶಬ್ದ ಬರುತ್ತಿರುವ ಸ್ಥಳಗಳಿಗೆ ಭೂ ವಿಜ್ಞಾನಿಗಳ ತಂಡ ತೆರಳಿ ಪರಿಶೀಲನೆ ನಡೆಸಿದೆ.

ಇಂದು ಬೆಳಗ್ಗೆ ಭಾರೀ ಸದ್ದಿನೊಂದಿಗೆ ಹಲವಾರು ಬಾರಿ ಭೂಮಿ ಕಂಪಿಸಿದ್ದು, ಜನ ಭಯಭೀತರಾಗಿದ್ದಾರೆ. ಇದೇ ಪ್ರದೇಶದಲ್ಲಿ ಕಳೆದ ಡಿಸೆಂಬರ್ ಮತ್ತು ಜನವರಿ ಮೊದಲ ವಾರದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದ್ದು, ಆತಂಕಕ್ಕೊಳಗಾಗಿದ್ದ ಜನ ಮನೆಯಿಂದ ಹೊರಗೋಡಿ ಬಂದಿದ್ದರು.

ಕಂಪನದಿಂದ ಹಲವು ಮನೆಗಳು ಬಿರುಕುಬಿಟ್ಟಿದ್ದವು. ಈಗ ಮತ್ತೆ ಭೂಮಿ ಕಂಪಿಸಿದೆ. ಪದೇ ಪದೇ ಭೂಕಂಪನವಾಗುತ್ತಿರುವುದಕ್ಕೆ ಭಯಭೀತರಾಗಿರುವ ಜನ ಮನೆಗಳನ್ನು ತೊರೆದು ದೂರದೂರದ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಸಚಿವ ಸುಧಾಕರ್ ಅವರು ಕೂಡ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದಿದ್ದಾರೆ. ತಿಂಗಳ ಹಿಂದೆ ಅಕ ಮಳೆಯಿಂದ ಭೂಮಿಯಲ್ಲಿ ಸೃಷ್ಟಿಯಾಗಿರುವ ಶಬ್ದದಿಂದ ಭೂಮಿ ಕಂಪಿಸುತ್ತಿದೆ ಎಂದು ಹೇಳಲಾಗಿದೆ. ನಿಖರ ಮಾಹಿತಿ ಸ್ಪಷ್ಟವಾಗಿಲ್ಲ. ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.

Swathi MG

Recent Posts

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

2 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

13 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

32 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

42 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago