ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಮೇಲೂರು ಗ್ರಾಮದ ಒಂದೇ ಕುಟುಂಬದ 7 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮೇಲೂರು ಗ್ರಾಮದ 80 ವರ್ಷದ ತಂದೆ, 46 ವರ್ಷದ ಮಗ, 35 ವರ್ಷದ ಸೊಸೆ, 65 ವರ್ಷದ ಮಹಿಳೆ, 9 ವರ್ಷದ ವಿದ್ಯಾರ್ಥಿ, 11 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ.ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.