ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರಗೆ ಬಂದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಿನ್ನೆ ರಾತ್ರಿ 7.10 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ.
ನಿನ್ನೆ ರಾತ್ರಿ ಸುಮಾರು 7.10 ಗಂಟೆಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದು, ಗ್ರಾಮಕ್ಕೆ ತಹಶೀಲ್ದಾರ್ ಭೇಟಿ ನೀಡಿದ್ದಾರೆ.