ಚಿಕ್ಕಬಳ್ಳಾಪುರ: ಟಾಟಾ ಎಸ್ ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
50 ವರ್ಷದ ವೆಂಕಟೇಶ್ ಮೃತ ದುರ್ದೈವಿಯಾಗಿದ್ದಾರೆ. ಪೆರೇಸಂದ್ರದಿಂದ ಚಿಕ್ಕಬಳ್ಳಾಪುರಕ್ಕೆ ಟಾಟಾ ಏಸ್ ಬರುತ್ತಿದ್ದ ವೇಳೆಯಲ್ಲಿ ದುರ್ಘಟನೆ ಸಂಭವಿಸಿದೆ.
ಇನ್ನು ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ. ಪೆರೇಸಂದ್ರ ಗ್ರಾಮದಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.