News Karnataka Kannada
Saturday, May 04 2024
ಚಿಕ್ಕಬಳ್ಳಾಪುರ

ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಮತದಾನದ ಅವಧಿ ವಿಸ್ತರಣೆ

Election Commission
Photo Credit :

ಬೆಂಗಳೂರು, ; ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ನಗರಸಭೆಯ 31 ವಾರ್ಡ್‍ಗಳಿಗೆ ಸೆ.3ರಂದು ನಡೆಯಲಿರುವ ಮತದಾನದ ಅವಧಿಯನ್ನು ಒಂದು ಗಂಟೆಗಳ ಕಾಲ ವಿಸ್ತರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ. ಕೋವಿಡ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸಾರ್ವಜನಿಕ ಅಂತರ ಕಾಪಾಡಿಕೊಂಡು ಮತದಾನ ಮಾಡಲು ಮತದಾರರಿಗೆ ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಮುಕ್ತವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡುವ ದೃಷ್ಟಿಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 5ಗಂಟೆಯವರೆಗೆ ನಿಗದಿಯಾಗಿದ್ದ ಮತದಾನದ ಅವಧಿಯನ್ನು ಒಂದು ಗಂಟೆ ಕಾಲ ವಿಸ್ತರಿಸಲಾಗಿದೆ. ಅಂದರೆ ಸಂಜೆ 5ರಿಂದ 6ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು