ಚಿಕ್ಕಬಳ್ಳಾಪುರ : ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ.
ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.
ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.