ಚಿಕ್ಕಬಳ್ಳಾಪುರ: ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ.
ಘಟನೆಯಲ್ಲಿ 22 ವರ್ಷದ ಧರಣೀಶ್ ಹಾಗೂ 52 ವರ್ಷದ ನಿರಂಜನ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದ್ದು, ಅಯ್ಯಪ್ಪ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಕಾರು ಪಂಚರ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ, ಕಾರಿಗೆ ಡಿಕ್ಕಿ ಹೊಡೆದಿದೆ.
ಮೃತರು ಆಂಧ್ರ ಮೂಲದವರು ಎಂದು ತಿಳಿದಿಬಂದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪೇರಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…