News Karnataka Kannada
Monday, April 29 2024
ಚಿಕ್ಕಬಳ್ಳಾಪುರ

ಶಿಡ್ಲಘಟ್ಟ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Photo Credit :

ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ವೃದ್ಧ ದಂಪತಿಗಳ ಪ್ರಕರಣವನ್ನು ಭೇಧಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಗರದ ಇಬ್ಬರು ಅಪ್ರಾಪ್ತರು ಸಹಿತ ಫೈಝ್ (20), ಬಂಧಿತ ಆರೋಪಿಗಳು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಶಿಡ್ಲಘಟ್ಟ ನಗರದ ಕಾಮಾಟಿಗೆರೆ ಪೇಟೆಯಲ್ಲಿ ಬಟ್ಟೆಯ ವ್ಯಾಪಾರಿ ಶ್ರೀನಿವಾಸ್, ಆತನ ಪತ್ನಿ ಪದ್ಮಾವತಿಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ‌ ಆರೋಪಿಗಳನ್ನು‌ ಶಿಡ್ಲಘಟ್ಟ ನಗರ ಪೊಲೀಸರು ವಿಶೇಷವಾಗಿ ತನಿಖೆ ನಡೆಸಿ ಬಂಧಿಸಲಾಗಿದೆ ಎಂದರು.

ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು ಅದರಲ್ಲಿ ಪ್ರಮುಖವಾಗಿ ಪೇದೆಗಳಾದ ಶ್ರೀಹರಿ,‌ಹರೀಶ್ ಅವರ ವಿಶೇಷ ಶ್ರಮದಿಂದ ಆರೋಪಿಗಳನ್ನು‌ ಬಂಧಿಸಲಾಗಿದ್ದು ತಂಡಕ್ಕೆ ಬಹುಮಾನವನ್ನು ನೀಡುವುದಾಗಿ ಜಿಲ್ಲಾ ಎಸ್ಪಿ ಜಿಕೆ ಮಿಥುನ್ ಕುಮಾರ್ ಘೋಷಿಸಿದರು.

ಬಂಧಿತ ಆರೋಪಿಗಳು ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ಭಾಗಿಯಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಹಾಗೂ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ಧರ್ಮೇಗೌಡ, ಸಬ್ ಇನ್ಸ್ಪೆಕ್ಟರ್ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು