ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ರೈಲ್ವೆ ನಿಲ್ದಾಣದಲ್ಲಿರೈಲ್ವೆ ಹಳಿ ಮೇಲೆ ಮಲಗಿದ್ದಾತನನ್ನು ರಕ್ಷಿಸಲು ಹೋದ ವ್ಯಕ್ತಿಯೆ ರೈಲಿನಡಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ನಾರಾಯಣ (54) ಮೃತ ವ್ಯಕ್ತಿ. ರೈಲ್ವೆ ಹಳಿ ಮೇಲೆ ಮಲಗಿದ್ದ ಸಾದಿಕ್ ಎಂಬ ವ್ಯಕ್ತಿಯನ್ನು ರಕ್ಷಿಸಲು ಹೋದ ನಾರಾಯಣ, ತಾವೇ ವೇಗವಾಗಿ ಬಂದ ರೈಲಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.
ಸಾದಿಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಸಾದಿಕ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.