ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಇಂದು ಜನಸ್ಪಂದನ ಸಮಾವೇಶ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದೆ ಇಡುವ ಉದ್ದೇಶದಿಂದ ಆಡಳಿತ ಪಕ್ಷ ಬಿಜೆಪಿ ಇಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವದ ಬದಲಾಗಿ ಜನಸ್ಪಂದನ ಸಮಾವೇಶ ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು, ಫಲಾನುಭವಿಗಳನ್ನು ಸೇರಿಸುವ ಗುರಿಯನ್ನು ಹೊಂದಲಾಗಿದೆ.

ಇದರ ಭಾಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲೆ 50 ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಅಷ್ಟೇ ಅಲ್ಲದೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾಗಿರುವ ಕಾರಣ ಈ ಕಾರ್ಯಕ್ರಮವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೇ 50ಸಾವಿರ ಜನರನ್ನು ಗುರಿಯಾಗಿಸಿಕೊಂಡಿರುವ ಬಿಜೆಪಿ, ಸಮಾವೇಶಕ್ಕೆ ಜನರನ್ನು ಕರೆ ತರಲು ಟಾರ್ಗೆಟ್ ನಿಗದಿ ಮಾಡಿಕೊಂಡಿದೆ.

ಸ್ಥಳಿಯ ಗ್ರಾಮ ಪಂಚಾಯತಿ ಸದಸ್ಯರುಗಳು ಹಾಗೂ ಮುಖಂಡರುಗಳಿಗೆ ಜನರನ್ನು ಕರೆತರುವ ಕಾರ್ಯವನ್ನು ನೀಡಿದೆ. ಸಚಿವರಿಂದ ಈ ಟಾರ್ಗೆಟ್ ನಿಗದಿಯಾಗಿದ್ದು, ಪ್ರತಿಯೊಂದು ಹಳ್ಳಿ ಹಳ್ಳಿಗಳಿಂದ ಜನರನ್ನು ಕರೆ ತರುವಂತೆ ಸೂಚಿಸಲಾಗಿದೆ.

ಅದರಂತೆ ಆಯಾ ಹಳ್ಳಿಗಳಿಗೆ ರಾತ್ರಿಯೇ ಬಸ್​ಗಳನ್ನು ಕಳುಹಿಸಲಾಗಿದ್ದು, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್​ಗಳ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲೇ 50ಸಾವಿರ ಜನರನ್ನು ಸಮಾವೇಶಕ್ಕೆ ಕರೆತರುವ ಪ್ಲಾನ್ ಹಾಕಿಕೊಳ್ಳಲಾಗಿದ್ದು, 876 ಬಸ್​ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Sneha Gowda

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

18 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

31 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

54 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago