News Karnataka Kannada
Thursday, May 02 2024
ಚಿಕ್ಕಬಳ್ಳಾಪುರ

ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದ ಬಿಜೆಪಿ ಸಂಸದ

bachhe gowda
Photo Credit : News Kannada

ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಮಂಗಳವಾರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ‌ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು.

ಈಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ‌ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಅಂತ ಪ್ರಧಾನಿ ಮೋದಿ ಹೇಳಿಬಿಟ್ಟಿದ್ದಾರೆ. ಹೀಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೋದಿ ಅವರು ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ತಂದೆ, ಮಗ, ಮೊಮ್ಮಗ, ಮೊಮ್ಮಗಳು ರಾಜಕಾರಣಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಹಿಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು