News Karnataka Kannada
Saturday, April 27 2024
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪ್ರವೇಶಿಸಿದ ಎಚ್ ಡಿ ಕೆ ನೇತೃತ್ವದ ‘ಪಂಚರತ್ನ ಯಾತ್ರೆ’

I-T raids will be conducted on opposition parties, says HD Kumaraswamy
Photo Credit : Facebook

ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ಆರಂಭಗೊಂಡ ‘ಪಂಚರತ್ನ ಯಾತ್ರೆ’ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿಗೆ ಪ್ರವೇಶಿಸಿತು.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ವೈ.ಹುಣಸನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯ ನೇತೃತ್ವ ವಹಿಸಿದ್ದರು. ಚಿಂತಾಮಣಿ ತಾಲ್ಲೂಕಿನ ಪವಿತ್ರ ಯಾತ್ರಾ ಸ್ಥಳವಾದ ಕೈವಾರದಲ್ಲಿ ಪಂಚರತ್ನ ಯಾತ್ರೆಯನ್ನು ಪ್ರಾರಂಭಿಸಿ ಚಿನ್ನಸಂದ್ರ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ನಂತರ, ಪಂಚರತ್ನ ಯಾತ್ರೆಯು ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇಹಳ್ಳಿಯ ಮೂಲಕ ಪ್ರವೇಶಿಸಿತು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಪಂಚರತ್ನ ಯಾತ್ರೆಯ ಅಲೆಯು ಕರ್ನಾಟಕ ರಾಜ್ಯದಾದ್ಯಂತ ವ್ಯಾಪಿಸಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜನರು ಭವ್ಯ ಸ್ವಾಗತ ಕೋರುತ್ತಿದ್ದಾರೆ ಎಂದು ಹೇಳಿದರು.

ರೇಷ್ಮೆ ನಗರಿ ಎಂದೇ ಖ್ಯಾತಿ ಪಡೆದಿರುವ ಶಿಡ್ಲಘಟ್ಟ ತಾಲೂಕಿನ ವೈ.ಹುಣಸನಹಳ್ಳಿ ಗ್ರಾಮವನ್ನು ಪ್ರವೇಶಿಸಿದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಮೂಲೆ ಮೂಲೆಗಳಿಂದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು