News Karnataka Kannada
Friday, May 03 2024
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ‘ಸಾಮಾಜಿಕ ಪಿಡುಗು ವರದಕ್ಷಿಣೆ ಸಮಾಜದಲ್ಲಿ ಇನ್ನೂ ಜೀವಂತವಾಗಿದೆ’

Inauguration of administrative office of Federation of Bunts Associations at Mulki on April 5
Photo Credit : Unsplash

ಚಿಕ್ಕಬಳ್ಳಾಪುರ: ವರದಕ್ಷಿಣೆ ಒಂದು ಸಾಮಾಜಿಕ ಪಿಡುಗಾಗಿದ್ದು, ಪ್ರಸ್ತುತ ಕೆಲವರು ಈ ಪಿಡುಗಿಗೆ ಬಲಿಯಾಗುತ್ತಿದ್ದಾರೆ. ವರದಕ್ಷಿಣೆ ನಿಷೇಧ ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಈ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನರಸಿಂಹಯ್ಯ ಸಭಾಂಗಣದಲ್ಲಿ ನಡೆದ ವರದಕ್ಷಿಣೆ ನಿಷೇಧ ಕಾಯ್ದೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ರೀತಿಯ ಹಿಂಸಾಚಾರಕ್ಕೆ ಒಳಗಾದ ಮಹಿಳೆಯರಿಗೆ ಸಮಾಲೋಚನೆ, ವೈದ್ಯಕೀಯ ಚಿಕಿತ್ಸೆ, ಕಾನೂನು ಸಲಹೆ ಮತ್ತು ರಕ್ಷಣಾತ್ಮಕ ನೆರವು ನೀಡುವ ಮೂಲಕ ಪರಿಹಾರ ಕೇಂದ್ರಗಳಲ್ಲಿ ತಾತ್ಕಾಲಿಕ ಪುನರ್ವಸತಿ ನೀಡಲಾಗುತ್ತಿದೆ. ಆದ್ದರಿಂದ ಈ ಕೇಂದ್ರಗಳು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಪರಿಹಾರ ಕೇಂದ್ರದ ಸಮರ್ಪಕ ಬಳಕೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕ್ರಿಮಿನಲ್ ಪ್ರಕರಣದ ಆರೋಪಿತ ಮಹಿಳೆಯರು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದರೆ, ಪರಿಹಾರ ಕೇಂದ್ರವು ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಾಯದಿಂದ ಸಂಬಂಧಪಟ್ಟವರನ್ನು ಜಿಲ್ಲಾ ಪರಿಹಾರ ಕೇಂದ್ರಕ್ಕೆ ದಾಖಲಿಸಲು ಮತ್ತು ಆಶ್ರಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಕೇಂದ್ರಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಪರಿಶೀಲಿಸಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು