ಚಿಕ್ಕಬಳ್ಳಾಪುರ: ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲ ಪತ್ನಿ ಗಿರಿಜಮ್ಮ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.