ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಕಾಣಸಿಕೊಂಡ ಹಿನ್ನೆಲೆ ಸೊಳ್ಳೆಯಲ್ಲಿ ಝೀಕಾ ವೈರಸ್ ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ 30 ಮಂದಿ ಸೋಂಕು ಲಕ್ಷಣಗಳುಳ್ಳ ವ್ಯಕ್ತಿಗಳ ಮಾದರಿಗಳ ಎನ್ಐವಿ (ರಾಷ್ಟ್ರೀಯ ವೈರಾಣು ಸಂಸ್ಥೆ) ಪರೀಕ್ಷಾ ವರದಿ ಬಂದಿದ್ದು, ಝೀಕಾ ಸೋಂಕು ಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದಿದೆ. ಇದರಿಂದ ಝೀಕಾ ಭೀತಿಯಲ್ಲಿದ್ದ ರಾಜ್ಯದ ಜನತೆ ನಿಟ್ಟಿಸಿರು ಬಿಟ್ಟಿದ್ದಾರೆ.
ಝಿಕಾ ವೈರಸ್ ನವಜಾತ ಶಿಶುಗಳಲ್ಲಿ ಮೈಕ್ರೋಸೆಫಾಲಿ ಸೇರಿ ಇತರೆ ಗಂಭೀರ ಸಮಸ್ಯೆ ಉಂಟು ಮಾಡಬಹುದು. ಹೀಗಾಗಿ ಸೋಂಕಿನ ಬಗ್ಗೆ ಗರ್ಭಿಣಿಯರು ಎಚ್ಚರ ವಹಿಸಬೇಕು. ಸಾರ್ವಜನಿಕರು ಹಗಲಿನ ವೇಳೆಯ ಸೊಳ್ಳೆಯ ಕಡಿತದಿಂದ ರಕ್ಷಣೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.