ಕಾಲೇಜು ವಿದ್ಯಾರ್ಥಿನಿ ಸಾವು: ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು

ಚಿಕ್ಕಬಳ್ಳಾಪುರ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ 22 ವರ್ಷದ ಪ್ರೀತಿ ಸೋಮವಾರ ಮಧ್ಯಾಹ್ನ ತನ್ನ ಕೋಣೆಯ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪ್ರತಿಷ್ಠಿತ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಇನ್ ಪಾರ್ಮಮೇಷನ್ ಸೈನ್ಸ್ ವಿಭಾಗದಲ್ಲಿ ಓದುತ್ತಿದ್ದ ಅವರು ಕಾಲೇಜಿನ ಮಹಿಳಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು.

ಪ್ರೀತಿ ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಸಮೀಪದ ಯಲ್ದೂರು ಗ್ರಾಮದವರು. ಪ್ರಾಥಮಿಕ ವಿಚಾರಣೆಯಿಂದ ಆಕೆ ಸೋಮವಾರ ಕಾಲೇಜಿಗೆ ಹೋಗದೆ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಆಕೆಯ ಸ್ನೇಹಿತರೊಬ್ಬರು ಅವಳನ್ನು ನೋಡಲೆಂದು ಅವಳ ಕೋಣೆಗೆ ಹೋದಾಗ, ಈ ಘಟನೆ ಬೆಳಕಿಗೆ ಬಂದಿದೆ. ಪೋಷಕರು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸರು ತನಿಖೆ ಆರಂಭಿಸಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

 

Ashitha S

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

17 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

43 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

51 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago