News Karnataka Kannada
Saturday, April 13 2024
Cricket
ಚಿಕ್ಕಬಳ್ಳಾಪುರ

ಇಂದು ಚಿಕ್ಕಬ್ಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

president droupadi murmu
Photo Credit : News Kannada

ಚಿಕ್ಕಬಳ್ಳಾಪುರ: ಇಂದು (ಜು.03) ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇಂದು ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಭದ್ರತೆಯ ಕಾರಣಕ್ಕೆ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕರ ಪ್ರವೇಶವನ್ನು ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಕಲಂ 144(3)ರ ಅಡಿಯಲ್ಲಿ ನಿಷೇಧಿಸಲಾಗಿದೆ. ಸಂಜೆ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಯೂನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸಲೆನ್ಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಘಟಿಕೋತ್ಸವದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಪ್ರೊ.ಅಜಯ್ ಕೆ.ಸೂದ್​, ಸಂಗೀತ ಮತ್ತು ಕಲೆ ವಿಭಾಗದಲ್ಲಿ ಡಾ.ಆರ್.ಕೆ.ಪದ್ಮನಾಭ, ಕ್ರೀಡೆ ಮತ್ತು ದೇಹದಾರ್ಢ್ಯತೆ ವಿಭಾಗದಲ್ಲಿ ಪುಲ್ಲೇಲ ಗೋಪಿಚಂದ್, ಆರೋಗ್ಯ ವಿಭಾಗದಲ್ಲಿ ಡಾ.ಪ್ರತಿಮಾ ಮೂರ್ತಿ, ಶಿಕ್ಷಣ ವಿಭಾಗದಲ್ಲಿ ಪ್ರೊ.ವಿಜಯ್ ಶಂಕರ್ ಶುಕ್ಲಾ, ಸಮಾಜಸೇವೆ ವಿಭಾಗದಲ್ಲಿ ತುಳಸಿಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು