News Karnataka Kannada
Thursday, May 02 2024
ಚಿಕ್ಕಬಳ್ಳಾಪುರ

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಗೆ ಕಿಸ್‌ ಕೊಟ್ಟ ಶಿಕ್ಷಕಿ: ಫೋಟೋ ವೈರಲ್‌

ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯರೊಬ್ಬರು ತನ್ನ ಮಗನ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
Photo Credit : News Kannada

ಚಿಕ್ಕಬಳ್ಳಾಪುರ: ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯರೊಬ್ಬರು ತನ್ನ ಮಗನ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಶಿಕ್ಷಕಿ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಮಾತ್ರವಲ್ಲದೇ, ಆತನೊಂದಿಗೆ ರೊಮ್ಯಾಂಟಿಕ್‌ ವೀಡಿಯೋ ಹಾಗೂ ಚಿತ್ರಗಳನ್ನು ಮಾಡಿ, ಸೆರೆ ಹಿಡಿದು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ನಡೆದಿದೆ. ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ಈ ಫೋಟೋಗಳು ಸೋರಿಕೆಯಾಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಲನೊಂದಿಗೆ ವಿವಿಧ ಭಂಗಿಗಳಲ್ಲಿ ಫೋಟೋ ತೆಗೆದಿದ್ದು, ತಾನೋರ್ವ ಶಿಕ್ಷಕಿ ಎಂಬುವುದನ್ನು ಮರೆತು ಈ ಕೆಲಸವನ್ನು ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಲತಾ ಮಾಡಿದ್ದಾರೆ. ವಿದ್ಯಾರ್ಥಿ ಕೂಡಾ ಶಿಕ್ಷಕಿಯನ್ನು ಮುದ್ದಾಡಿದ್ದು, ಶಿಕ್ಷಕಿ ಬಾಲಕನಿಗೆ ಕಿಸ್‌ ಕೊಟ್ಟಿರುವ ಫೋಟೋಗಳು ಎಲ್ಲೆಡೆ ವೈರಲ್‌ ಆಗಿದೆ. ವಿದ್ಯಾರ್ಥಿಯ ಪೋಷಕರು ಶಿಕ್ಷಕಿಯ ಈ ವರ್ತನೆಗೆ ಸಿಟ್ಟುಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತರಲಾಗಿದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು