ದೇವನಹಳ್ಳಿ: ಹೊಸಕೋಟೆ ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ (ಜ.11) ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಜನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ, ವಸತಿ ನಿಲಯಕ್ಕೆ ತೆರಳಿದ್ದಾರೆ. ಅಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ತಕ್ಷಣ ವಸತಿ ನಿಲಯದ ವಾರ್ಡ್ನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಪ್ರೌಡಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯಿಂದ ಈ ರೀತಿಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಳೆದೆರಡು ದಿನಗಳಿಂದ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸುತ್ತಿರುವ ಆರೋಪ ಕೇಳಿಬಂದಿದೆ.
ಈ ಪ್ರಕರಣದ ಕುರಿತು ಇದೀಗ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.