News Karnataka Kannada
Friday, May 03 2024
ಚಿತ್ರದುರ್ಗ

ಕೋವಿಡ್‌: ಚಿತ್ರದುರ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Chithradurga Dc 09082021
Photo Credit :

ಚಿತ್ರದುರ್ಗ: ಕೊರೊನಾ ಸೋಂಕು ಹರಡಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಈ ಆದೇಶ ಆ.16ರವರೆಗೆ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರಲಿದೆ. ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ದೇವಸ್ಥಾನಗಳಲ್ಲಿ ದೇವರ ದರ್ಶನ ಹಾಗೂ ದೈನಂದಿನ ಪೂಜೆ ಹೊರತುಪಡಿಸಿ ಇತರೆ ಸೇವೆಗೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಯಾವುದೇ ತರಹದ ಜಾತ್ರೆ, ಉತ್ಸವ, ಮೆರವಣಿಗೆ, ಪ್ರತಿಭಟನೆ ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳಂತೆ ಕೈಗೊಳ್ಳುವ ಕಾರ್ಯಕ್ರಮಗಳನ್ನು ಹೊರತುಪಡಿಸಿ ದೊಡ್ಡ ಮಟ್ಟದ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು