News Karnataka Kannada
Sunday, May 19 2024
ಚಿತ್ರದುರ್ಗ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಮೂಲ ದಾಖಲಾತಿ ಸಲ್ಲಿಕೆಗೆ ಅಂತಿಮ ಅವಕಾಶ

Photo Credit :

 ಚಿತ್ರದುರ್ಗ :  ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ಅಂತಮ ಆಯ್ಕೆ ಪಟ್ಟಿ, ತಾತ್ಕಾಲಿಕ ಪರಿಶೀಲನಾ ಆಯ್ಕೆಪಟ್ಟಿಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ವೆಬ್‍ಸೈಟ್ https://chitradurga.nic.in/en/notice_category/recruitment ಪ್ರಕಟಿಸಲಾಗಿದೆ.

ಈ ಸಂಬಂಧ ಮೇ 9 ಹಾಗೂ ಮೇ 10 ರಂದು ಹಾಜರಾದ ಅಭ್ಯರ್ಥಿಗಳ ಮೂಲ ದಾಲಾತಿಗಳನ್ನು ಪಡೆಯಲಾಗಿದೆ. ಗೈರಾದ 124 ಜನ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪಡೆಯಲು ಮೇ 21ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಮೂಲ ದಾಖಲಾತಿಗಳನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣ, ಚಿತ್ರರ್ದು ಇಲ್ಲಿ ಖುದ್ದು ಹಾಜರಾಗಿ ಸಲ್ಲಿಸಲು ಮತ್ತೊಮ್ಮೆ ಅಂತಿಮ ಅವಕಾಶವನ್ನು ನೀಡಲಾಗಿದೆ.

ಮೇ 21ರಂದು ಮೂಲ ದಾಖಲಾತಿಗಳನ್ನು ಹಾಜರುಪಡಿಸಲು ವಿಫಲರಾದ ಅಭ್ಯರ್ಥಿಗಳನ್ನು ಯಾವುದೇ ಸೂಚನೆ ನೀಡದೆ ಆಯ್ಕೆ ಪಟ್ಟಿಯಿಂದ ಕೈಬಿಡಲಾಗುವುದು ಹಾಗೂ ಈ ಸಂಬಂಧ ಭವಿಷ್ಯದಲ್ಲಿ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಹಾಗೂ ಗ್ರಾಮಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು