ಹಿರಿಯೂರು: ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಕಾರು ಅಪಘಾತವಾಗಿದ್ದು, ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಶಾಸಕ ಟಿ. ರಘುಮೂರ್ತಿ ಅವರು ನಿನ್ನೆ ರಾತ್ರಿ ಚಳ್ಳಕೆರೆಯಿಂದ ಮಸ್ಕಲ್ ಗೊಲ್ಲರಹಟ್ಟಿಯ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ಮಹೀಂದ್ರಾ ಜೈಲೋ ಕಾರು ಶಾಸಕರು ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಶಾಸಕ ಟಿ.
ರಘುಮೂರ್ತಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಏರ್ ಬ್ಯಾಗ್ ತೆರೆದುಕೊಂಡಿದ್ದು ಶಾಸಕರಿಗೆ ಯಾವುದೇ ಗಾಯಗಳಾಗಿಲ್ಲ. ಎಂದು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.