ಚಿತ್ರದುರ್ಗಕ್ಕೆ ಮದಕರಿ ನಾಯಕರ ಕೊಡುಗೆ ಅಪಾರ: ಮಾಜಿ ಸಚಿವ ಎಚ್.ಆಂಜನೇಯ

ಚಿತ್ರದುರ್ಗ: ಭರಮಸಾಗರ ಒಂದು ಸಾವಿರ ಎಕರೆ ವಿಸ್ತೀರ್ಣದ ದೊಡ್ಡಕೆರೆಯ ನಿರ್ಮಾತೃ ಬಿಚ್ಚುಗತ್ತಿ ಭರಮಣ್ಣ ನಾಯಕ ಹಾಗೂ ಒಣಗಿದ್ದ ಕೆರೆಗೆ ನೀರು ಹರಿಸಿದ ಭಗೀರಥರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ನಾವು ಸದಾ ಸ್ಮರಿಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿತ್ರದುರ್ಗ ಜಿಲ್ಲೆ ಮಳೆಯಾಶ್ರೀತ ಪ್ರದೇಶವಾಗಿದ್ದು, ಬರಗಾಲವನ್ನು ಒದ್ದು ಮಲಗಿದೆ. ಇಲ್ಲಿನ ನೀರಿನ ಸಮಸ್ಯೆ ಅರಿತು 17ನೇ ಶತಮಾನದಲ್ಲಿಯೇ ನೀರಿನ ಸಂಗ್ರಹಕ್ಕೆ ನೂರಾರು ಕೆರೆ, ಕಟ್ಟೆ, ಕೊಳ್ಳ, ಹೊಂಡ ನಿರ್ಮಿಸಿದ ಖ್ಯಾತಿ ದುರ್ಗವನ್ನು ಆಳಿದ ಮದಕರಿ ನಾಯಕರಿಗೆ ಸಲ್ಲುತ್ತದೆ. ಅದರಲ್ಲೂ ಬಿಚ್ಚುಗತ್ತಿ ಭರಮಣ್ಣ ನಾಯಕ ಅನೇಕ ಕೆರೆ, ಹೊಂಡಗಳನ್ನು ನಿರ್ಮಿಸುವ ಮೂಲಕ ಬಯಲುಸೀಮೆ ಜನರ ಬಾಯಾರಿಕೆ ತಣಿಸುವ ಕಾರ್ಯ ಮಾಡಿರುವುದು ಸದಾ ಸ್ಮರಣೀಯ. ಈ ಹಿನ್ನೆಲೆಯಲ್ಲಿ ಇಬ್ಬರು ಮಹಾನ್ ಸಾಧಕರ ಕಂಚಿನ ಪ್ರತಿಮೆಗಳನ್ನು ಕೆರೆದಂಡೆ ಮೇಲೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಶೇಷವಾಗಿ ಸಂತೇಹೊಂಡ ಸೇರಿದಂತೆ ಚಿತ್ರದುರ್ಗ ನಗರ ಕೇಂದ್ರದಲ್ಲಿ ದೊಡ್ಡ ಹೊಂಡಗಳನ್ನು ನಿರ್ಮಿಸಿದ್ದಾರೆ. ಇದರಿಂದ ಅಂತರ್ಜಲ ವೃದ್ಧಿ ಜತೆಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಕೆಲಸವನ್ನು ಮಾಡಿದ್ದಾರೆ. ಅದರಲ್ಲೂ ಭರಮಸಾಗರದಲ್ಲಿ ಬೃಹತ್ ಕೆರೆ ನಿರ್ಮಿಸಿ ಸಾವಿರಾರು ರೈತರ ಬದುಕಿಗೆ ಆಸರೆ ಒದಗಿಸಿದ್ದರು. ಆದರೆ, ಕಾಲಕ್ರಮೇಣ ಮಳೆ ಕಡಿಮೆಯಾಗಿ, ವಿವಿಧೆಡೆಚೆಕ್‌ಡ್ಯಾಂ ನಿರ್ಮಾಣಗಳಿಂದ ಕೆರೆ ಬರಿದಾಗಿ ಭರಮಸಾಗರ ಸುತ್ತಮುತ್ತಲಿನ ಕೃಷಿಕರ ಬದುಕು ಸಂಕಷ್ಟಕ್ಕೆ ಸಿಲುಕಿತ್ತು ಎಂದಿದ್ದಾರೆ.

ಸದಾ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮನ ಮಿಡಿಯುವ ಸಿರಿಗೆರೆ ತರಳಬಾಳು ಜಗದ್ಗುರುಗಳು ಈ ಪ್ರದೇಶದಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಚಿಂತನೆ ನಡೆಸಿ, ಸರ್ಕಾರದ ಮೇಲೆ ನಿರಂತರ ಒತ್ತಡ ತಂದು ತುಂಗಾಭದ್ರ ನದಿಯಿಂದ ಏತ ನೀರಾವರಿ ಮೂಲಕ ಕೆರೆ ತುಂಬಿಸುವ ಮಹತ್ತರ ಕಾರ್ಯಕ್ಕೆ ಮುಂದಾದರು ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಅನುದಾನ ಬಿಡುಗಡೆ ಮಾಡಿದರು. ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕಾರಣಿಗಳು ಶ್ರೀಗಳ ಆಶಯಕ್ಕೆ ಬೆನ್ನೆಲುಬಾಗಿ ನಿಂತು, ತುರ್ತಾಗಿ ಯೋಜನೆಗೆ ಚಾಲನೆ ನೀಡಿ, ಒಂದೂವರೆ ವರ್ಷದಲ್ಲಿಯೇ ಕಾಮಗಾರಿ ಮುಕ್ತಾಯಗೊಂಡಿದ್ದು ಗಮನಾರ್ಹ.

ಈಗ ಕೆರೆ ನಿರ್ಮಾತೃ, ದೂರದೃಷ್ಟಿ ನಾಯಕ ಬಿಚ್ಚುಗತ್ತಿ ಭರಮಣ್ಣ ನಾಯಕನ ಪ್ರತಿಮೆ ನಿರ್ಮಾಣ ಮಾಡಬೇಕೆಂದು ನನ್ನ ಹೆಬ್ಬಯಕೆ. ಈ ನಿಟ್ಟಿನಲ್ಲಿ ದೊಡ್ಡಕೆರೆ ದಂಡೆ ಮೇಲೆ ಸುಂದರ ಉದ್ಯಾನ ನಿರ್ಮಾಣ ಮಾಡಿ, ಅದರಲ್ಲಿ ಕೆರೆ ನಿರ್ಮಾತೃ ಬಿಚ್ಚುಗತ್ತಿ ಭರಮಣ್ಣ ನಾಯಕ ಹಾಗೂ ತರಳಬಾಳು ಶ್ರೀಗಳ ಕಂಚಿನ ಪ್ರತಿಮೆ ನಿರ್ಮಿಸಬೇಕು. ಈ ಮಹಾನ್ ಸಾಧಕರ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯದಲ್ಲಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ ಎಂದು ಆಂಜನೇಯ ತಿಳಿಸಿದ್ದಾರೆ.

Sneha Gowda

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

24 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

47 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago