ಚಿತ್ರದುರ್ಗ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.
ದುಮ್ಮಿ ಗ್ರಾಮದ ಬಳಿ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ನಲ್ಲಿ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದರು. ಈ ವೇಳೆ ಖಾಸಗಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬಿ.ದುರ್ಗಾ ಗ್ರಾಮದ ನಾಗರಾಜ್ (45), ಪತ್ನಿ ಶೈಲಜಾ (38) ಪುತ್ರರಾದ ವೀರೇಶ್ (15) ಸಂತೋಶ್ (13) ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.