News Karnataka Kannada
Monday, April 29 2024
ಚಿತ್ರದುರ್ಗ

ದಲಿತ ಯುವಕನ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುತ್ತೇವೆ: ಮುರುಗೇಶ್‌ ನಿರಾಣಿ

Kalaburagi: Murugesh R Nirani meets Basavaraj Patil Sedam and seeks his blessings
Photo Credit :

ಕಲಬುರಗಿ: ಮುಸ್ಲಿಂ ಯುವತಿಯೋರ್ವಳನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ಧಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪೋಲೀಸರು ಕಾನೂನಿನ ರೀತಿಯಲ್ಲಿಯೇ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದು ಕಠಿಣ ಕ್ರಮ ಜರುಗಿಸಲಾಗುತ್ತದೆ” ಎಂದಿದ್ದಾರೆ.

“ಕಾಂಗ್ರೆಸ್‌ ಮತ್ತು ಜೆಡಿಎಸ್  ಇದನ್ನೇ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನೋವು ತಿಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತದೆ” ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು