ಚಿತ್ರದುರ್ಗ

ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ: ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನ

ಚಿತ್ರದುರ್ಗ: ನಾಲ್ಕು ವರ್ಷದ ಮಗುವಿಗೆ ವಿಷವುಣಿಸಿದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.

ವಕೀಲ ಪತಿಯ ಕಿರುಕುಳಕ್ಕೆ ಬೇಸತ್ತ ತಾಯಿ ವನೀತಾ ನಾಲ್ಕು ವರ್ಷದ ಮಗನಿಗೆ ವಿಷಕೊಟ್ಟು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಇಬ್ಬರೂ ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ಮಗು ಚಾರ್ವಿನ್ ಸಾವನ್ನಪ್ಪಿದ್ದು, ತಾಯಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.

ಪತಿ ಲೋಕೇಶ್ ವಕೀಲನಾಗಿದ್ದು, ಪತ್ನಿಗೆ ಕಿರುಕುಳ ನಿಡುತ್ತಿದ್ದ ಎನ್ನಲಾಗಿದೆ. ಮನನೊಂದ ಪತ್ನಿ ಮಗುವಿಗೂ ವಿಷವುಣಿಸಿ ತಾನೂ ವಿಷಕುಡಿದು ಬಳಿಕ ತವರುಮನೆ ಕೋಡಿಹಳ್ಳಿ ಗ್ರಾಮಕ್ಕೆ ತೆರಳಲು ತಯಾರಾಗಿದ್ದರು. ಇದೇ ವೇಳೆ ತೀವ್ರ ಅಸ್ವಸ್ಥನಾಗಿ ಬಿದ್ದ ಮಗನನ್ನು ತಾಯಿಯೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆ ತಲುಪುತ್ತಿದ್ದಂತೆ ತಾಯಿಯೂ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

Gayathri SG

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

7 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

17 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

18 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

41 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

51 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

56 mins ago