ಚಿತ್ರದುರ್ಗ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಇಂದಿನಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ್ದು, ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದದು, ಇದು ಕಾಂಗ್ರೆಸ್ ನಡೆಸುತ್ತಿರುವ ಡ್ರಾಮಾ ಪಾರ್ಟ್-2 ಎಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ತಮ್ಮ ಶಕ್ತಿ ಏನೆಂದು ತೋರಿಸಲು ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಪಾದಯಾತ್ರೆ ನಡೆಸುತ್ತಿದ್ದಾರೆ. ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವುದಿಲ್ಲ ಎಂದು ಸರ್ಕಾರ ಎಲ್ಲಿಯೂ ಹೇಳಿಲ್ಲ. ಅದು ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದೆ. ಆದರೆ, ಮಾಡಲು ಕೆಲಸವಿಲ್ಲದ ಕಾಂಗ್ರೆಸ್ನವರು ಈಗ ಸುಖಾಸುಮ್ಮನೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.