ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ : ಸಚಿವ ಬಿ.ಶ್ರೀರಾಮುಲು

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಲೆಮಾರಿ ಜನಾಂಗದವರಿಗೆ ಮನೆ ಕಟ್ಟಿಕೊಳ್ಳಲು ಕಾರ್ಯಾದೇಶ ನೀಡುವ ಕಾರ್ಯಕ್ರಮದಲ್ಲಿ ಅಲೆಮಾರಿ ಜನಾಂಗದ ಫಲಾನುಭವಿಗಳಿಗೆ ವಸತಿಯೋಜನೆಯಡಿ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

ಮೊಳಕಾಲ್ಮುರು ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಸಂಚಾರಕ್ಕೆ ಬಸ್ ಸೌಕರ್ಯವಿಲ್ಲದೇ ಹಲವಾರು ಸಂಕಷ್ಟಗಳನ್ನು ಎದುರಿಸಿದ್ದರು. ಮೊಳಕಾಲ್ಮುರು ಕ್ಷೇತ್ರದ ಜನರಿಗೆ ಬಸ್ ಸೌಕರ್ಯ ಕಲ್ಪಿಸಬೇಕು ಎಂಬುದು ಹಿರಿಯ ನಾಗರಿಕರ ಹಾಗೂ ಪತ್ರಕರ್ತರ ಒತ್ತಾಸೆ ಆಗಿತ್ತು.

ಈ ಹಿನ್ನಲೆಯಲ್ಲಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಎರಡು ತಿಂಗಳೊಳಗೆ ಬಸ್ ಸೌಕರ್ಯ ಕಲ್ಪಿಸಲಾಗುವುದು. ಕ್ಷೇತ್ರದ ಯಾವ ಗ್ರಾಮವೂ ಸಹ ಬಸ್ ಸೌಲಭ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಬೀದರ್‌ನಿಂದ ಶ್ರೀರಂಗಪಟ್ಟಣಕ್ಕೆ ಹೋಗುವ ರಸ್ತೆ, ಶ್ರೀರಂಗಪಟ್ಟಣದಿಂದ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಿದ್ದು, ಮೊಳಕಾಲ್ಮುರು ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಯಧನ ನೀಡುವ ಸಲುವಾಗಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ, ತಳಕು ಮತ್ತು ರಾಂಪುರ ಭಾಗದಲ್ಲಿ ಸುಮಾರು ೯೫ ಸ್ತ್ರೀಶಕ್ತಿ ಗುಂಪುಗಳಿದ್ದು, ಸ್ತ್ರೀಶಕ್ತಿ ಗುಂಪುಗಳ ಏಳಿಗೆಗಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಸ್ತ್ರೀಶಕ್ತಿ ಗುಂಪುಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮೃತ್ ಯೋಜನೆಗೆ ಜಿಲ್ಲೆಯಲ್ಲಿ ೨೨ ಗ್ರಾ.ಪಂ.ಗಳನ್ನು ಆಯ್ಕೆ ಮಾಡಲಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ನಲಗೇತಹಟ್ಟಿ, ರಾಂಪುರ, ಕೊಂಡ್ಲಹಳ್ಳಿ ಹಾಗೂ ದೊಡ್ಡ ಉಳ್ಳಾರ್ತಿ ಸೇರಿದಂತೆ ನಾಲ್ಕು ಗ್ರಾ.ಪಂ.ಗಳನ್ನು ಅಮೃತ್ ಯೋಜನೆ ಆಯ್ಕೆ ಮಾಡಿಕೊಂಡಿದ್ದು, ಈ ನಾಲ್ಕು ಗಾ.ಪಂ. ವ್ಯಾಪ್ತಿಯಲ್ಲಿ ಸುಮಾರು ೫ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಡಾ.ಕೆ.ನಂದಿನಿದೇವಿ, ಗ್ರಾ.ಪಂ. ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

1 min ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

16 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

18 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

43 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

55 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

1 hour ago