ಚಿತ್ರದುರ್ಗ: ಸಿ ಎಂ ಜೊತೆ ಮಾತನಾಡಿ ಉಳಿದ ಅವಧಿಗೆ ತಿಪ್ಪಾರೆಡ್ಡಿ ಅವರನ್ನು ಮಂತ್ರಿ ಮಾಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ವೈ ಹೇಳಿದರು.
ಚಿತ್ರದುರ್ಗ ದಲ್ಲಿ ಶಾಸಕ ತಿಪ್ಪಾರೆಡ್ಡಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ಆರು ಬಾರಿ ಶಾಸಕರಾಗಿರುವ ಅವರಿಗೆ ಈ ಹಿಂದೆ ಮಂತ್ರಿ ಮಾಡಬೇಕಿತ್ತು. ಆದರೆ ಸಾಧ್ಯವಾಗಲಿಲ್ಲ. ಹಾಗಾಗಿ ಸಿಎಂ ಜೊತೆ ಮಾತನಾಡಲಾಗುವುದು ಎಂದರು.
ಕಾಂಗ್ರೆಸ್ ನಲ್ಲಿ ಗುಂಪುಗಳಿವೆ. ಡಿಕೆಶಿ, ಸಿದ್ರಾಮಯ್ಯ ಗುಂಪುಗಳಿವೆ. ಹಾಗಾಗಿ ಕಾಂಗ್ರೆಸ್ ನಲ್ಲಿ ಕಚ್ಚಾಟ ನಡೆಯುತ್ತಿದೆ. ಬೇರೆಯವರ ಬಗ್ಗೆ ಹಗುರವಾಗಿ ಮಾತನಾಡಿ ಕಾಂಗ್ರೆಸ್ ಆಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದರು.
ನಾವು ಬೇರೆಯವರನ್ನು ಟಿಕೀಸುವುದಿಲ್ಲ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಜನರಿಗೆ ತಿಳಿಸುವ ಮೂಲಕ ಎರಡು ಕ್ಷೇತ್ರಗಳ ಉಪಚುನಾವಣೆ ಯಲ್ಲಿ ಗೆಲ್ಲುತ್ತೆವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿ ಚುನಾವಣೆಯು ನಮಗೆ ಮುಖ್ಯ. ಹಾಗಾಗಿ ಅ.20 ರಿಂದ ಚುನಾವಣಾ ಪ್ರಚಾರ ನಡೆಸಲಾಗುವುದು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಜನರ ಮನ ಗೆದ್ದಿವೆ. ಹಾಗಾಗಿ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದರು.
ಇಡೀ ವಿಶ್ವವೇ ಮೋದಿ ಅವರನ್ನು ದೊಡ್ಡ ನಾಯಕ ಎಂದು ಒಪ್ಪಿಕೊಂಡಿದೆ. ಆದರೆ ಕಾಂಗ್ರೆಸ್ ನವರು ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.