ಚಿತ್ರದುರ್ಗ

ಬಿಜೆಪಿ, ಜೆಡಿಎಸ್ ಸಮನ್ವಯ ಸಭೆಯಲ್ಲಿ ಕಾರ್ಯಕರ್ತರ ಮಾರಾಮಾರಿ

ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ಚೈತನ್ಯ ಮೇಲೆ ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧುನಿಂದ ಹಲ್ಲೆ ಮಾಡಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಪೋಸ್ಟ್ ಹಿನ್ನೆಲೆ ಗಲಾಟೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತೆರಳಿದ ಬೆನ್ನಲ್ಲೇ ಮಾರಾಮಾರಿ ನಡೆದಿದೆ.

ರಾಜ್ಯದೆಲ್ಲೆಡೆ ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಸಾಕಷ್ಟು ಗೊಂದಲದ ನಡುವೆಯೂ ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಆದರೆ ತುರುವೇಕೆರೆಯಲ್ಲಿ ಮಾತ್ರ ಎರಡೂ ಪಕ್ಷಗಳ ಗೊಂದಲ ಜಗತ್ ಜಾಹೀರಾಗಿತ್ತು. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದರು.

ತುರುವೇಕೆರೆಯ ರಾಜಕೀಯ ಬದ್ದ ವೈರಿಗಳಾದ ಎಂಟಿ ಕೃಷ್ಣಪ್ಪ, ಮಸಾಲೆ ಜಯರಾಂ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಅಲ್ಲಿದವರಿಗೆ ವಿಶೇಷ ಅನಿಸಿದ್ದರೆ, ಕಾರ್ಯಕರ್ತರು ಪರಸ್ಪರ ವಾಗ್ವಾದ ಮಾಡಿಕೊಂಡಿದ್ದು ಮಾತ್ರ ದೋಸ್ತಿ ಮುರಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago