ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ.
ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ರ್ದುದೈವಿಗಳು ಎಂದು ತಿಳಿದುಬಂದಿದೆ.
ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.