ಚಿತ್ರದುರ್ಗ: ವೀರವನಿತೆ ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದರ ಅಡಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ರೂಪಿಸಲಾಗುವುದು ಎಂದು ಅವರು ಹೇಳಿದರು. ಚಿತ್ರದುರ್ಗದ ಒನಕೆ ಓಬವ್ವ ಸ್ಮಾರಕ ಟ್ರಸ್ಟ್ ಗೆ ಭೂಮಿ ಮಂಜೂರು ಮಾಡುವ ಬಗ್ಗೆ ಜಿಲ್ಲಾಡಳಿತದಿಂದ ವರದಿ ಬಂದ ನಂತರ ಈ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.