ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ.
ಪೊಲೀಸರು ಕಸ್ಟಡಿಗೆ ಪಡೆದುಕೊಂಡ ಹಿನ್ನೆಲೆ ಇಂದು ಶ್ರೀಗಳನ್ನು ವಿಚಾರಣೆ ನಡೆಸಲಿದ್ದಾರೆ. ಪೋಕ್ಸೋ ಕೇಸ್ ಮತ್ತು ಅಟ್ರಾಸಿಟಿ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲಿದ್ದು, ಚಿತ್ರದುರ್ಗ ಡಿವೈಎಸ್ಪಿ ಕಚೇರಿಯಲ್ಲಿಯೇ ವಿಚಾರಣೆ ನಡೆಯಲಿದೆ.
ನಿನ್ನೆ ನಿರಂತರ ಎರಡು ಗಂಟೆಗಳ ಕಾಲ ಡಿವೈಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನು ನಿನ್ನೆ ರಾತ್ರಿ 8 ಗಂಟೆಗೆ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ವಿಚಾರಣೆ ಆರಂಭಿಸಲಾಗಿದೆ.