ಚಿತ್ರದುರ್ಗ: ಲೈಂಗಿಕ ಹಗರಣ, ಆಡಳಿತಾಧಿಕಾರಿಗಳ ನೇಮಕ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಚಿತ್ರದುರ್ಗ: ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಶರಣರು ಸೆ.1ರಿಂದ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿರೋಧಿಸಿ ಮಠಾಧೀಶರು ಸೋಮವಾರ ಧರಣಿ ನಡೆಸಲಿದ್ದಾರೆ.

ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರಭಾರ ಮಠಾಧೀಶ ಬಸವಪ್ರಭು ನೇತೃತ್ವದಲ್ಲಿ ಧರಣಿ ನಡೆಯಲಿದೆ. ನೇಮಕಾತಿ ಆದೇಶವನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲು ರಾಜ್ಯದಾದ್ಯಂತ ಮಠಾಧೀಶರು ಪ್ರತಿಭಟನೆ ನಡೆಸಲಿದ್ದಾರೆ.

ಡಿ.13ರಂದು ಕರ್ನಾಟಕ ಸರ್ಕಾರ ಚಿತ್ರದುರ್ಗ ಮಠಕ್ಕೆ ಶಿವಮೂರ್ತಿ ಮುರುಘಾ ಶರಣರ ಬದಲಿಗೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು.

ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಕಂದಾಯ ಇಲಾಖೆ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಆರೋಪಿ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ದೌರ್ಜನ್ಯ ಕಾಯ್ದೆಯಡಿ ಎರಡು ಪ್ರಕರಣಗಳಿವೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿಗಳ ವರದಿಯಲ್ಲಿ ತಿಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಪ್ರಕರಣವು ನ್ಯಾಯಾಲಯದ ತನಿಖೆಯ ಹಂತದಲ್ಲಿತ್ತು ಮತ್ತು ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದರು.

ಈ ಸಂಬಂಧ ಅಡ್ವೊಕೇಟ್ ಜನರಲ್ (ಎಜಿ) ಅವರ ಅಭಿಪ್ರಾಯವನ್ನು ಸರ್ಕಾರ ಕೇಳಿದೆ. ಟ್ರಸ್ಟ್ ಆಸ್ತಿಯನ್ನು ರಕ್ಷಿಸುವ ದೃಷ್ಟಿಯಿಂದ ಮತ್ತು ಧರ್ಮದರ್ಶಿಯು ನ್ಯಾಯಾಂಗ ಬಂಧನದಲ್ಲಿರುವುದರಿಂದ, ಆಡಳಿತಾಧಿಕಾರಿಯನ್ನು ನೇಮಿಸಬಹುದು ಎಂದು ಎಜಿ ಅಭಿಪ್ರಾಯಪಟ್ಟರು.

Ashika S

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

2 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

10 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

25 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

25 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

49 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

51 mins ago