ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ತಡರಾತ್ರಿ ನಡೆದಿದೆ.
ಈ ಘಟನೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಬಳಿ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.