News Karnataka Kannada
Sunday, May 05 2024
ಚಿತ್ರದುರ್ಗ

ಶೋಭಾಯಾತ್ರೆಯಲ್ಲಿ ಗೋಡ್ಸೆ ಫೋಟೋ ಪ್ರದರ್ಶನ: ಎಫ್‌ ಐಆರ್‌ ದಾಖಲು

FIR lodged against Godse for displaying Godse's photo at Shobha Yatra
Photo Credit : News Kannada

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಅ.8ರಂದು ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಶೋಭಾಯಾತ್ರೆಯಲ್ಲಿ ಗಾಂಧಿ ಹಂತಕ ನಾಥೂರಾಮ್‌ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿದ ಆರೋಪದ ಮೇಲೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ನೀಡಿದ ದೂರಿನ ಆಧಾರದ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರು ಉಲ್ಲೇಖಿಸಿಲ್ಲ ಕಾನೂನು ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದಿಂದ ಗೋಡ್ಸೆ ಚಿತ್ರ ಪ್ರದರ್ಶಿಸಲಾಗಿದೆ. ಶಾಂತಿಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಚಳ್ಳಕೆರೆ ಗೇಟ್‌ ಸಮೀಪ ಜೈನಧಾಮದಿಂದ ಚಂದ್ರವಳ್ಳಿ ಕೆರೆಯವರೆಗೆ ಸಾಗಿದ ಶೋಭಾಯಾತ್ರೆಯಲ್ಲಿ ನಾಥೂರಾಮ್‌ ಗೋಡ್ಸೆ, ಸಾವರ್ಕರ್‌ ಹಾಗೂ ಬಜರಂಗದಳ ಕಾರ್ಯಕರ್ತ ಹರ್ಷನ ಭಾವಚಿತ್ರ ಕಾಣಿಸಿಕೊಂಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು