ಚಿತ್ರದುರ್ಗ: ಚಿತ್ರದುರ್ಗದಲ್ಲಿ ಅ.8ರಂದು ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಶೋಭಾಯಾತ್ರೆಯಲ್ಲಿ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿದ ಆರೋಪದ ಮೇಲೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ನೀಡಿದ ದೂರಿನ ಆಧಾರದ ಮೇರೆಗೆ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ನಲ್ಲಿ ಆರೋಪಿಗಳ ಹೆಸರು ಉಲ್ಲೇಖಿಸಿಲ್ಲ ಕಾನೂನು ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದಿಂದ ಗೋಡ್ಸೆ ಚಿತ್ರ ಪ್ರದರ್ಶಿಸಲಾಗಿದೆ. ಶಾಂತಿಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚಳ್ಳಕೆರೆ ಗೇಟ್ ಸಮೀಪ ಜೈನಧಾಮದಿಂದ ಚಂದ್ರವಳ್ಳಿ ಕೆರೆಯವರೆಗೆ ಸಾಗಿದ ಶೋಭಾಯಾತ್ರೆಯಲ್ಲಿ ನಾಥೂರಾಮ್ ಗೋಡ್ಸೆ, ಸಾವರ್ಕರ್ ಹಾಗೂ ಬಜರಂಗದಳ ಕಾರ್ಯಕರ್ತ ಹರ್ಷನ ಭಾವಚಿತ್ರ ಕಾಣಿಸಿಕೊಂಡಿತ್ತು.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.