News Karnataka Kannada
Monday, April 22 2024
Cricket
ಚಿತ್ರದುರ್ಗ

ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾಯಿಯೂ ಅಗ್ನಿ ಪ್ರವೇಶ

ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಅಗ್ನಿ ಪ್ರವೇಶ ಮಾಡಿದ ಘಟನೆ ಚಿತ್ರದರ‍್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ.
Photo Credit : NewsKarnataka

ಚಿತ್ರದುರ್ಗ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಅಗ್ನಿ ಪ್ರವೇಶ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ ಗ್ರಾಮದಲ್ಲಿ  ನಡೆದಿದೆ.

ಮಾರಕ್ಕ ಎಂಬ 24 ವರ್ಷದ ಮಹಿಳೆಯೇ ತನ್ನ ಇಬ್ಬರು ಮಕ್ಕಳಾದ ನಯನ (4) ಮತ್ತು ಹರ್ಷ ವರ್ಧನ್ (2)ಗೆ ಪೆಟ್ರೋಲ್‌ ಹಾಕಿ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಮಕ್ಕಳು ಗ್ರಾಮದ ಹೊರವಲಯಕ್ಕೆ ಹೋಗಿ ಅಲ್ಲಿ ಈ ಅತಿರೇಕದ ಕೃತ್ಯ ನಡೆಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು