News Karnataka Kannada
Monday, May 13 2024
ಬೆಂಗಳೂರು

ವಿಧಾನಸೌಧದಲ್ಲಿ ʼಅರಿಶಿನ ಕುಂಕುಮʼ ಬಳಸದಂತೆ ಸುತ್ತೋಲೆ : ಸಿಎಂ ಸ್ಪಷ್ಟನೆ

ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದ್ದು,ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ.
Photo Credit : News Kannada

ಬೆಂಗಳೂರು: ರಾಜ್ಯ ಸರ್ಕಾರವು ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, “ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ & ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ.

ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ಹೇಳಿದ್ದಾರೆ. ಜೊತೆಗೆ ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು