ಅಲ್ಪ ಸಂಖ್ಯಾತರಿಗಾಗಿ 1 ಸಾವಿರ ಕೋಟಿ ರೂ.ಗಳ ಯೋಜನೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶುಕ್ರವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿ ಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ತಯಾರಿಸಬೇಕು. ಈ ವೇಳೆ ಅಲ್ಪಸಂಖ್ಯಾತರು ಹೆಚ್ಚಾಗಿನೆಲೆಸಿರುವ ಹಾಗೂಮೂಲಸೌಕರ್ಯ ಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.

ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ. ಈ ಹಿನ್ನೆ ಲೆಯಲ್ಲಿ ರಾಜ್ಯ ಸರ್ಕಾರವೇ ಕೇಂದ್ರದ ಪಾಲನ್ನೂ ಭರಿಸಲು ತೀರ್ಮಾನಿಸಿದೆ. ಪ್ರಸ್ತುತ 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದ್ದು, ಬಜೆಟ್ಟಲ್ಲಿ 60 ಕೋಟಿ ರು. ನಿಗದಿಯಾಗಿದೆ. ಕೇಂದ್ರದ ಪಾಲನ್ನೂ ಭರಿಸಬೇಕಿರುವ ಹಿನ್ನೆಲೆಯಲ್ಲಿ ಇಲಾಖಾ ಅನುದಾನದ ಮರು ಹಂಚುವ ಮೂಲಕ 40 ಕೋಟಿ ರು. ಹೆಚ್ಚುವರಿ ಹಣ ವನ್ನೂ ವಿದ್ಯಾರ್ಥಿವೇತನಕ್ಕೆ ಬಳಕೆ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚಿಸಿದರು.

Ashika S

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

21 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

25 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

31 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

43 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

49 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

1 hour ago