ಇಂದು ರಾಜ್ಯ ಬಜೆಟ್‌, ಎಲ್ಲರ ಚಿತ್ತ ಬಜೆಟ್‌ನತ್ತ

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಸಹಜವಾಗಿಯೇ ಫೆ.17 ರಂದು ಮಂಡನೆಯಾಗಲಿರುವ ಬಜೆಟ್‌ನತ್ತ ಎಲ್ಲರ ಚಿತ್ತ ನೆಟ್ಟಿದೆ. ಕಾಂಗ್ರೆಸ್‌ ಉಚಿತ ಕೊಡುಗೆ, ಸಾಲಮನ್ನಾ ಮೂಲಕ ಜನರ ಮನಗೆಲ್ಲಲು ಹೊರಟಿರುವ ಈ ದಿನಗಳಲ್ಲಿ ಆಡಳಿತಾರೂಢ ಬಿಜೆಪಿಯ ಕೊಡುಗೆಗಳೇನು ಎಂಬುದು ಎಲ್ಲರ ನಿರೀಕ್ಷೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಫೆ.17ರಂದು ಬೆಳಗ್ಗೆ 10.15ಕ್ಕೆ ಬಜೆಟ್‌ ಮಂಡಿಸಲಿದ್ದಾರೆ. ಸುಮಾರು 1 ಗಂಟೆಗಳ ಕಾಲ ಬಜೆಟ್‌ ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿಯಿದೆ.

ಕಳೆದ ಬಜೆಟ್‌ ವಿವರ: ಕಳೆದ ಬಜೆಟ್​ನಲ್ಲಿ ಸಿಎಂ ಬೊಮ್ಮಾಯಿ ಅವರು 2.65 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದರು. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ಕ್ಷೇತ್ರಕ್ಕೆ 68 ಸಾವಿರ ಕೋಟಿ ರೂ. ಅನುದಾನ ನೀಡಿದ್ದರು. ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 55 ಸಾವಿರ ಕೋಟಿ ರೂ., ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ ಕ್ಷೇತ್ರಕ್ಕೆ 56 ಸಾವಿರ ಕೋಟಿ ರೂ, ಮಹಿಳೆಯರ ಸಬಲೀಕರಣ ಮತ್ತು ಕ್ಷೇಮಾಭಿವೃದ್ಧಿಗೆ 43 ಸಾವಿರ ಕೋಟಿ ರೂ,. ಮಕ್ಕಳ ಅಭ್ಯುದಯಕ್ಕೆ 40 ಸಾವಿರ ಕೋಟಿ ರೂ, ಕೃಷಿನ ಕ್ಷೇತ್ರಕ್ಕೆ 33 ಸಾವಿರ ಕೋಟಿ ರೂ. ಅನುದಾನವನ್ನು ಕೊಡಲಾಗಿತ್ತು.

Umesha HS

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago