News Karnataka Kannada
Saturday, May 04 2024
ಬೆಂಗಳೂರು

4 ಗಂಟೆಗಳ ಕಾಲ ಚರ್ಚೆ ನಡೆಸಿದ ಸಿಎಂ, ಡಿಸಿಎಂ

ರಾಜ್ಯದ ಎಲ್ಲಾ ಮಳಿಗೆಗಳಲ್ಲಿ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು,  ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ.
Photo Credit : News Kannada

ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ಸುಮಾರು 20 ಶಾಸಕರಿಗೆ ನಿಗಮ ಮಂಡಳಿಗೆ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಇದಕ್ಕಾಗಿ ಶುಕ್ರವಾರ ನಾಲ್ಕು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಚರ್ಚೆ ನಡೆಸಿದ್ದಾರೆ. 15 ರಿಂದ 20 ಶಾಸಕರಿಗೆ ಆಯಕಟ್ಟಿನ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಲಾಗಿದೆ. ವಾರದೊಳಗೆ ಆದೇಶ ಹೊರಡಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜತೆ ಶಿವಕುಮಾ‌ ಅವರು ನಿಗಮ, ಮಂಡಳಿ ನೇಮಕಾತಿ ಕುರಿತು ಇತ್ತೀಚೆಗೆ ಚರ್ಚೆ ನಡೆಸಿದ್ದರು. ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್‌ ಸುರ್ಜೆವಾಲಾ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುವಂತೆ ಖರ್ಗೆ ಮತ್ತು ವೇಣುಗೋಪಾಲ್ ಸೂಚಿಸಿದ್ದರು.

ಸುರ್ಜೇವಾಲಾ ಅವರು ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಅವರ ಜತೆ ಚರ್ಚಿಸಿದ ಬಳಿಕ ನಿಗಮ, ಮಂಡಳಿಗಳ ನೇಮಕಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು