ಬೆಂಗಳೂರು: 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಡಿಕೆಶಿ, ಅಂಬೇಡ್ಕರ್, ಬಸವಣ್ಣ, ಗಾಂಧಿ ಸೇರಿದಂತೆ ಎಲ್ಲಾ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.
ನಂತರ ವಿಧಾನಸೌಧ ಆವರಣದಲ್ಲಿರುವ ಮುನೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ದೀರ್ಘದಂಡ ನಮಸ್ಕಾರ ಹಾಕಿದ ಡಿಕೆಶಿ ಉತ್ತರದ ನಂದಿ ದ್ವಾರದ ಮೂಲಕ ಪ್ರಜಾ ದೇಗುಲ ಪ್ರವೇಶಿಸಿದರು. ಬಳಿಕ ನೂತನ ಸಂಪುಟ ಸಚಿವರ ಜೊತೆ ಮುಖ್ಯಮಂತ್ರಿಯಾಗಿ ಮೊದಲ ಕ್ಯಾಬಿನೆಟ್ ಸಭೆ ನಡೆಸಿದರು.

