ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನೂತನ 262 ಹೊಸ ಅಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ಇಂದು (ನ.30) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಅಂಬ್ಯುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದರು. 82.02 ಕೋಟಿ ರೂ. ವೆಚ್ಚದಲ್ಲಿ 262 ಆಂಬ್ಯುಲೆನ್ಸ್ ಗಳು ಖರೀದಿಸಲಾಗಿದೆ.
262 ಪೈಕಿ 157 ಅಂಬ್ಯುಲೆನ್ಸ್ಗಳಲ್ಲಿ BLS (ಬೇಸಿಕ್ ಲೈಫ್ ಸಪೋರ್ಟ್) ಹಾಗೂ 105 ಅಂಬ್ಯುಲೆನ್ಸ್ ಅಡ್ವಾನ್ಸ್ ಲೈಫ್ ಸಪೋರ್ಟ್(ALS) ಸೌಲಭ್ಯವಿದ್ದು, ಹೃದಯ ಮತ್ತು ಉಸಿರಾಟದ ತುರ್ತು ಪರಿಸ್ಥಿಗಳಲ್ಲಿ ಇವು ಸಹಕರಿಯಾಗಿವೆ.
262 ಆಂಬ್ಯುಲೆನ್ಸ್ ಗಳಲ್ಲಿ 157 ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್ ಹಾಗೂ 105 ಎಎಲ್ಎಸ್ (ಸುಧಾರಿತ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್ ) ಇರಲಿವೆ. ಎಎಲ್ಎಸ್ ಆಂಬ್ಯುಲೆನ್ಸ್ ಗಳು ವೆಂಟಿಲೇಟರ್ ಹಾಗೂ ಡಿಫ್ರಿಬಿಲೇಟರ್ಗಳನ್ನು ಒಳಗೊಂಡಿವೆ. ಹೀಗಾಗಿ ಹೃದಯ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವ ರೋಗಿಗಳಿಗೂ ಯಾವುದೇ ಪ್ರಾಣಾಪಾಯ ಇಲ್ಲದೆ ಆಸ್ಪತ್ರೆಗೆ ಸಾಗಿಸಲು ಅನುಕೂಲವಾಗುತ್ತದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…