Bengaluru 22°C
Ad

ಬೆಲೆ ಏರಿಕೆ ಬೆನ್ನಲ್ಲೇ ಇಂದು ಮಧ್ಯಾಹ್ನ ಸಿಎಂ ಸಿದ್ದು ಮಹತ್ವದ ಸುದ್ದಿಗೋಷ್ಠಿ

Cm (2)

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ.

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ‌ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ).

Ad
Ad
Nk Channel Final 21 09 2023
Ad