Bengaluru 22°C
Ad

ರೇಣುಕಾಸ್ವಾಮಿ ಪೋಷಕರಿಂದ ಸಿಎಂ ಭೇಟಿ: ಸೊಸೆಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ

ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಅಳಲು ತೋಡಿಕೊಂಡರು.

ಬೆಂಗಳೂರು: ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಅಳಲು ತೋಡಿಕೊಂಡರು.

Ad
300x250 2

ಸಿಎಂ ಭೇಟಿ ವೇಳೆ ತಮ್ಮ ಮನೆಯ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ರೇಣುಕಾಸ್ವಾಮಿ ತಂದೆ-ತಾಯಿ ಕಣ್ಣೀರು ಹಾಕಿದರು. ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.

ಸದ್ಯ ಪೊಲೀಸರ ತನಿಖೆ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ತಂದೆ-ತಾಯಿ, ಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಪೋಷಕರ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದರು.

ಜೂನ್ 8 ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಅಲ್ಲಿಂದ ಪಟ್ಟಣಗೆರೆ ಶೆಡ್‍ಗೆ ಕರೆದೊಯ್ದು ಚಿತ್ರಹಿಂಸೆ ನೀಡಿ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿತ್ತು. ಕೊಲೆ ಬಳಿಕ ಮೃತದೇಹವನ್ನು ಸುಮ್ಮನಹಳ್ಳಿ ಮೊರಿ ಬಳಿ ಎಸೆಯಲಾಗಿತ್ತು.

ಇತ್ತ ನಾಲ್ವರು ಕಾಮಾಕ್ಷಿಪಾಳ್ಯ ಠಾಣೆಗೆ ತೆರಳಿ ಹಣದ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ನಾಲ್ವರು ಶರಣಾಗಿದ್ದರು. ಇದರಿಂದ ಸಂಶಯಗೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದಾಗ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಜೈಲಿಗಟ್ಟಲಾಗಿದೆ.

Ad
Ad
Nk Channel Final 21 09 2023
Ad