Bengaluru 29°C
Ad

ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ, ಸ್ವಾಮೀಜಿ ಅವರದಲ್ಲ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದರು. 

ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದರು.

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದರು.

Ad
Ad
Nk Channel Final 21 09 2023
Ad