Bengaluru 23°C
Ad

ತೈಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದ ಸಿಎಂ

ತೈಲ ದರ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ಹಾಗೂ ಜೆಡಿಎಸ್‍ನವರು ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಪ್ರತಿಭಟನೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಬೆಂಗಳೂರು: ತೈಲ ದರ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ಹಾಗೂ ಜೆಡಿಎಸ್‍ನವರು ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಪ್ರತಿಭಟನೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದಾಗ ಬೆಲೆ ಏರಿಕೆ ಬಗ್ಗೆ ಕೇಂದ್ರದ ಮೇಲೆ ಹೇಳಿಕೆ ಕೊಟ್ಟಿದ್ದರು. ನಾನು ಪ್ರಧಾನಿ ಆದ್ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸ್ತೀವಿ ಎಂದಿದ್ದರು. ಅದಕ್ಕೆ ವಿರುದ್ಧವಾಗಿ ಈಗ ಕೆಲಸ ಮಾಡುತ್ತಿದ್ದಾರೆ.

ನರೇಂದ್ರ ಮೋದಿ ಪ್ರಧಾನಿ ಆದಾಗ ಪೆಟ್ರೋಲ್ ಬೆಲೆ 72.26 ರೂ. ಇತ್ತು, ಜೂನ್ 2024ರಲ್ಲಿ 104 ರೂ.ಪಾಯಿ ಆಗಿತ್ತು, ಡೀಸೆಲ್ ಬೆಲೆ 57 ರೂ. ಇತ್ತು, ಈಗ 98 ರೂ.ಆಗಿದೆ. ಈಗ ಹೇಳಿ, ಬೆಲೆ ಹೆಚ್ಚು ಮಾಡಿದ್ದು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ಜಿಎಸ್‍ಟಿ ತಂದಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಅಧಿಕಾರ ಇಲ್ಲ. ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಸೆಸ್ ವಿಧಿಸುವ ಅಧಿಕಾರ, ಅಬಕಾರಿ ಸುಂಕ, ಸ್ಟ್ಯಾಂಪ್ ಡ್ಯೂಟಿ ವಿಧಿಸುವ ಅಧಿಕಾರ ಮಾತ್ರ ರಾಜ್ಯ ಸರ್ಕಾರಕ್ಕೆ ಇದೆ. ಉಳಿದೆಲ್ಲ ತೆರಿಗೆಯನ್ನು ಅವರೇ ವಿಧಿಸ್ತಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರದ ವಿಶೇಷ ಅನುದಾನದ ವಿಚಾರವಾಗಿ, 5,495 ಕೋಟಿ ರೂ. ತೆರಿಗೆ ಪಾಲು ಕಡಿಮೆಯಾಗಿದೆ. ವಿಶೇಷ ಅನುದಾನ ಘೋಷಣೆ ಮಾಡಿ ರಾಜ್ಯಕ್ಕೆ ಹಣ ಕೊಡಲಿಲ್ಲ. ನಿರ್ಮಲಾ ಸೀತಾರಾಮನ್ ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿಲ್ಲ. ಭದ್ರಾ ಮೇಲ್ದಂಡೆ, ಬೆಂಗಳೂರು ಪೆರಿಫಿರಲ್ ರಿಂಗ್ ರೋಡ್‍ಗಳ ಯೋಜನೆಗೆ ವಿಶೇಷ ಅನುದಾನ ನೀಡಿಲ್ಲ. ಇವರು ಯಾರ ಬಗ್ಗೆ ಪ್ರತಿಭಟನೆ ಮಾಡಬೇಕು ಎಂದು ಅವರು ಕಿಡಿಕಾರಿದ್ದಾರೆ.

Ad
Ad
Nk Channel Final 21 09 2023
Ad